ಧರ್ಮಸ್ಥಳ ಅಭಿಮಾನಿ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಗದಗ, 13 ಆಗಸ್ಟ್ (ಹಿ.ಸ.) ಆ್ಯಂಕರ್:- ಧರ್ಮ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ತಡೆಗಟ್ಟಲು ಧರ್ಮಸ್ಥಳ ಅಭಿಮಾನಿ ವೇದಿಕೆಯ ನೇತೃತ್ವದಲ್ಲಿ ಗದಗ ನಗರದಲ್ಲಿ ಬೃಹತ್ ಜನಾಗ್ರಹ ಯಾತ್ರೆ ಮತ್ತು ಪ್ರತಿಭಟನೆ ನಡೆಯಿತು. ಗದಗ ನಗರದ ಅಂಬೇಡ್ಕರ್ ಭವನದಿಂದ ಜನಸಾಗರದೊಂದಿಗೆ ಯಾತ್ರೆ ಪ್ರಾರಂಭಗೊಂಡ
ಪೋಟೋ


ಗದಗ, 13 ಆಗಸ್ಟ್ (ಹಿ.ಸ.)

ಆ್ಯಂಕರ್:- ಧರ್ಮ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ತಡೆಗಟ್ಟಲು ಧರ್ಮಸ್ಥಳ ಅಭಿಮಾನಿ ವೇದಿಕೆಯ ನೇತೃತ್ವದಲ್ಲಿ ಗದಗ ನಗರದಲ್ಲಿ ಬೃಹತ್ ಜನಾಗ್ರಹ ಯಾತ್ರೆ ಮತ್ತು ಪ್ರತಿಭಟನೆ ನಡೆಯಿತು.

ಗದಗ ನಗರದ ಅಂಬೇಡ್ಕರ್ ಭವನದಿಂದ ಜನಸಾಗರದೊಂದಿಗೆ ಯಾತ್ರೆ ಪ್ರಾರಂಭಗೊಂಡು, ಡಿಸಿ ಕಚೇರಿಯವರೆಗೆ ಮೆರವಣಿಗೆ ಸಾಗಿತು. ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಧರ್ಮದ ಮೇಲೆ ನಡೆಯುತ್ತಿರುವ ದಾಳಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳು, ಜೈನ ಸಮುದಾಯ, ಆಟೋ ಸೇನೆ ಸೇರಿದಂತೆ ಅನೇಕ ಹಿತಾಸಕ್ತಿ ಸಂಘಟನೆಗಳ ಸದಸ್ಯರು ಭಾಗಿಯಾಗಿದ್ದರು.

ಈ ವೇಳೆ ಗದಗನ ಶ್ರೀ ಮುಕ್ಕಣ್ಣೇಶ್ವರ ಸ್ವಾಮೀಜಿ ಮಾತನಾಡಿ, ಸರ್ಕಾರ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದೆ, ಆದ್ದರಿಂದ ತ್ವರಿತವಾಗಿ ವರದಿ ಪ್ರಕಟಿಸಬೇಕು. ಹಿಂದೂ ಧರ್ಮವನ್ನು ಗುರಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ದೂರುದಾರರ ಮಂಪರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸಂಘಟನೆಗಳ ಪ್ರತಿನಿಧಿಗಳು, ಅಪಪ್ರಚಾರವನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande