ಜಾರ್ಖಂಡ್‌ನಲ್ಲಿ ಪೋಲಿಸ್ ಗುಂಡಿಗೆ ಓರ್ವ ನಕ್ಸಲ್ ಬಲಿ
ಪಶ್ಚಿಮ ಸಿಂಗ್‌ಭೂಮ್, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಸೌತಾ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಿಂದ ಒಂದು ಎಸ್‌ಎಲ್‌ಆರ್ ರ
Encounter


ಪಶ್ಚಿಮ ಸಿಂಗ್‌ಭೂಮ್, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಸೌತಾ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಿಂದ ಒಂದು ಎಸ್‌ಎಲ್‌ಆರ್ ರೈಫಲ್ ವಶಪಡಿಸಿಕೊಳ್ಳಲಾಗಿದೆ.

ಬೆಳಿಗ್ಗೆ, ಕಾಡಿನಿಂದ ಸುತ್ತುವರಿದ ಗುಡ್ಡಗಾಡು ಪ್ರದೇಶವಾದ ಸೌತಾ ಬಳಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರ ಮೇಲೆ ನಕ್ಸಲರು ಗುಂಡು ಹಾರಿಸಿದ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಮತ್ತು ಜಾರ್ಖಂಡ್ ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದರು. ಈ ವೇಳೆ ಒಬ್ಬ ನಕ್ಸಲ್ ಸಾವನ್ನಪ್ಪಿದನು. ಆತನ ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಐಜಿ ಡಾ. ಮೈಕೆಲ್ ರಾಜ್ , ಚೈಬಾಸಾ ಪ್ರದೇಶದ ಸೇರಿದಂತೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಿರಂತರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande