ಬೆಳಗಾವಿ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ಖಂಡಿಸಿ
ಬೆಳಗಾವಿಯಲ್ಲಿ ಧರ್ಮಸ್ಥಳ ಸಂಘದ ಮಹಿಳೆಯರು, ರೈತರು, ಭಕ್ತರು ಪ್ರತಿಭಟನೆ ನಡೆಸಿದರು. ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಧರ್ಮಸ್ಥಳಕ್ಕೆ ಪ್ರತಿದಿನ 1 ಲಕ್ಷದವರೆಗೆ ಭಕ್ತರು ಭೇಟಿ ನೀಡುತ್ತಾರೆ, ಅವರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸರಕಾರ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa