ನವದೆಹಲಿ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬಾಪಿ ಗ್ರಾಮದ ಬಳಿ ಪಿಕಪ್ ಟ್ರಕ್ ಮತ್ತು ಟ್ರೇಲರ್ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ₹2 ಲಕ್ಷ ಮತ್ತು ಗಾಯಾಳುಗಳಿಗೆ ₹50 ಸಾವಿರ ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa