ರೋಟರಿ ಕ್ಲಬ್ ಸಮಾಜ ಸೇವೆ ಶ್ಲಾಘನೀಯ: ಡಾ.ಪ್ರಸಾದ
ಹುಬ್ಬಳ್ಳಿ, 13 ಆಗಸ್ಟ್ (ಹಿ.ಸ.): ಆ್ಯಂಕರ್:ಬಡವರಿಗೆ , ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಸರ್ಕಾರಿ ಬಾಲಕರ ಶಾಲೆಗಳಿಗೆ ಸಹಾಯ ಮಾಡುತ್ತಿರುವ ರೋಟರಿ ಕ್ಲಬ್ ಆಪ್ ಹುಬ್ಬಳ್ಳಿ ಎಲೈಟ್‍ನ ಸಮಾಜ ಸೇವೆ ಶ್ಲಾಘನೀಯ ಎಂದು ಸ್ವರ್ಣಾ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿ.ಎಸ್.ವಿ ಪ್ರಸಾದ ಹೇಳಿದರು. ಹುಬ್
Prasad


ಹುಬ್ಬಳ್ಳಿ, 13 ಆಗಸ್ಟ್ (ಹಿ.ಸ.):

ಆ್ಯಂಕರ್:ಬಡವರಿಗೆ , ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಸರ್ಕಾರಿ ಬಾಲಕರ ಶಾಲೆಗಳಿಗೆ ಸಹಾಯ ಮಾಡುತ್ತಿರುವ ರೋಟರಿ ಕ್ಲಬ್ ಆಪ್ ಹುಬ್ಬಳ್ಳಿ ಎಲೈಟ್‍ನ ಸಮಾಜ ಸೇವೆ ಶ್ಲಾಘನೀಯ ಎಂದು ಸ್ವರ್ಣಾ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿ.ಎಸ್.ವಿ ಪ್ರಸಾದ ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ರೋಟರಿ ಕ್ಲಬ್ ಆಪ್ ಹುಬ್ಬಳ್ಳಿ ಎಲೈಟ್‍ನ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ರೋಟರಿ ಕ್ಲಬ್ ಉತ್ತಮ ಸೇವೆಗಳನ್ನು ಸಲ್ಲಿಸುವ ಮೂಲಕ ಸಮಾಜದಲ್ಲಿ ತನ್ನದೇ ಛಾಪು ಮೂಡಿಸಿದೆ ಜೊತೆಗೆ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿ ,ಮುಂದಿನ ದಿನದಲ್ಲಿ ಮತ್ತಷ್ಟು ಸೇವೆ ಸಲ್ಲಿಸುವಂತಾಗಬೇಕು. ರೋಟರಿ ಕ್ಲಬ್‍ಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಅವುಗಳು ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಬಡತನ ನಿರ್ಮೂಲನೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತವೆ. ರೋಟರಿ ಕ್ಲಬ್‍ಗಳು ಸ್ಥಳೀಯ ಸಮುದಾಯಗಳ ಅಗತ್ಯಗಳನ್ನು ಪೂರೈಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಂಡು ಅವುಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಾ ಬಂದಿವೆ ಎಂದರು.

ಇದೇ ವೇಳೆ ಸಂಪೂರ್ಣ ಶಿಕ್ಷಣ ನೀಡಲು ಇಬ್ಬರು ವಿದ್ಯಾರ್ಥಿಗಳನ್ನು ದತ್ತು ಪಡೆಯುವುದಾಗಿ ಡಾ.ಪ್ರಸಾದ್ ಹೇಳಿದರು.

ಸಮಾರಂಭದಲ್ಲಿ ರಾಧಿಕಾ ಗೋಕಲೆ , ದೇವಕಿ ಯೋಗಾನಂದ , ರೀತು ಸರಾಫ , ರವಿ , ಮೂಲಿಮನಿ , ಡಾ. ಅಮಿತ್ ಸತ್ತೂರ ಸೇರಿದಂತೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande