ಬಳ್ಳಾರಿ : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ತಕ್ಷಣ ನಿಲ್ಲಿಸಿ : ಭಕ್ತಾಧಿಗಳ ಆಕ್ರೋಶ
ಬಳ್ಳಾರಿ, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ಎಂಟು ನೂರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಖ್ಯಾತಿ ಮತ್ತು ಪ್ರಭಾವವನ್ನು ಕಡೆಸಲಿಕ್ಕಾಗಿಯೇ ಕೆಲ ದುಷ್ಕರ್ಮಿಗಳು `ಕಂಡಲ್ಲಿ ಕುಣಿ ತೋಡಿಸುತ್ತಿರುವುದ''ನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಶ್ರೀ ಕ್ಷೇತ್ರ ಧ
ಬಳ್ಳಾರಿ : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ತಕ್ಷಣ ನಿಲ್ಲಿಸಿ : ಭಕ್ತಾಧಿಗಳ ಆಕ್ರೋಶ


ಬಳ್ಳಾರಿ : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ತಕ್ಷಣ ನಿಲ್ಲಿಸಿ : ಭಕ್ತಾಧಿಗಳ ಆಕ್ರೋಶ


ಬಳ್ಳಾರಿ : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ತಕ್ಷಣ ನಿಲ್ಲಿಸಿ : ಭಕ್ತಾಧಿಗಳ ಆಕ್ರೋಶ


ಬಳ್ಳಾರಿ, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ಎಂಟು ನೂರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಖ್ಯಾತಿ ಮತ್ತು ಪ್ರಭಾವವನ್ನು ಕಡೆಸಲಿಕ್ಕಾಗಿಯೇ ಕೆಲ ದುಷ್ಕರ್ಮಿಗಳು `ಕಂಡಲ್ಲಿ ಕುಣಿ ತೋಡಿಸುತ್ತಿರುವುದ'ನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿ ವೇದಿಕೆ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಸಲ್ಲಿಸಿದೆ.

ಗಿರೀಶ ಮಟ್ಟೆನ್ನವರ, ಮಹೇಶ ಶೆಟ್ಟಿ ತಿಮರೋಡಿ, ಸಮೀರ್ ಎಂ.ಡಿ, ಸಂತೋಷ್ ಶೆಟ್ಟಿ, ಜಯಂತ ಟಿ, ಅಜಯ್ ಅಂಚನ್ ಮತ್ತು ಅವರ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಪೂಜ್ಯನೀಯ ೀ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರಿಗೆ ಕಳಂಕ ತರುವಂಥಹ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯವನ್ನು ಗುರಿಯಾಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಶ್ರೀ ಕ್ಷೇತ್ರದ ಕೋಟ್ಯಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಅನಾಮಿಕನು ನೀಡಿದ ದೂರಿಗೆ `ವಿಶೇಷ ತನಿಖಾ ತಂಡ' ರಚಿಸಿ ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ. ಆದರೆ, ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಅಪಪ್ರಚಾರ ನಡೆಸುತ್ತಿರುವುದು ನಮ್ಮೆಲ್ಲರ ವಿಶ್ವಾಸಕ್ಕೆ, ನಂಬಿಕೆಗೆ ಮತ್ತು ಶ್ರದ್ಧಾ-ಭಕ್ತಿಗೆ ತೀವ್ರ ಧಕ್ಕೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಕಳೆದ 13 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮೇಲೆ ನಡೆಯುತ್ತಿರುವ ಷಡ್ಯಂತ್ರ ಮತ್ತು ಷಡ್ಯಂತ್ರದಾರರ ವಿರುದ್ಧ ಸರ್ಕಾರ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಬೇಕು. ತಪ್ಪು - ಸುಳ್ಳು ಪ್ರಚಾರ ಮಾಡಲು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿರುವವರ ವಿರುದ್ಧ ತಕ್ಷಣವೇ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ನಾರಾಯಣರಾವ್ ಪಾರ್ಕ್‍ನಿಂದ ಜಿಲ್ಲಾಡಳಿತದವರೆಗೂ ಪ್ರತಿಭಟನಾಕಾರರು ಕಾಲ್ನಡಿಗೆಯಲ್ಲಿ ಆಗಮಿಸಿದರು. ಸಾವಿರಾರು ಭಕ್ತಾಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande