ರಾಯಚೂರು, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಯಚೂರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ಉತ್ತಮ ಕಾರ್ಯ ಸಾಧನೆ ಮಾಡಿದ್ದರಿಂದಾಗಿ ಕಂದಾಯ ಇಲಾಖೆಯ ಆಯುಕ್ತರು ಅಭಿನಂದನಾ ಪತ್ರ ಕಳುಹಿಸಿದ್ದಾರೆ.
ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ರಾಜ್ಯದ ಸಾರ್ವಜನಿಕರಿಗೆ ನಾನಾ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ರಾಯಚೂರು ಜಿಲ್ಲೆಯ ನಾಡ ಕಚೇರಿಗಳಲ್ಲಿ ಜುಲೈ-2025ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ 48,649 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ.99.61ರಷ್ಟು ವಿಲೇವಾರಿ ಮಾಡಿ 5.32 ಸಿಗ್ಮಾ ಮೌಲ್ಯವನ್ನು ಪಡೆದಿರುತ್ತೀರಿ. 7.10 ವಿಲೇವಾರಿ ಸೂಚ್ಯಂಕದ ಪ್ರಕಾರ ತಮ್ಮ ಜಿಲ್ಲೆಯಲ್ಲಿ 8.10 ಪಟ್ಟು ನಿಗದಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಜುಲೈ-2025ರ ಮಾಹೆಯಲ್ಲಿ ತಮ್ಮ ರಾಯಚೂರು ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯವಾಗಿದೆ.
ನಿಮ್ಮ ರಾಯಚೂರು ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ನಿಮ್ಮ ಹಾಗೂ ನಿಮ್ಮ ನಾಡಕಚೇರಿ ಅಥವಾ ಅಟಲ್‌ಜೀ ಜನಸ್ನೇಹಿ ಕೇಂದ್ರದ ಸಿಬ್ಬಂದಿಗಳ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಅದ್ದರಿಂದ ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯದ ಪರವಾಗಿ ನಿಮ್ಮ ತಂಡಕ್ಕೆ ನನ್ನ ಅಭಿನಂದನೆಯನ್ನು ವ್ಯಕ್ತಪಡಿಸಲು ಇಚ್ಛಿಸುತ್ತೇನೆ. ಇನ್ನು ಮುಂದಿನ ದಿನಗಳಲ್ಲಿಯು ಸಹ ನಿಮ್ಮಿಂದ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಕಂದಾಯ ಇಲಾಖೆಯ ಆಯುಕ್ತರಾದ ಪೊಮ್ಮಲ ಸುನೀಲ್‌ಕುಮಾರ್ ಅವರು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ರಾಯಚೂರ ಜಿಲ್ಲೆಯಲ್ಲಿ ಸಾಮಾಜಿಕ ನೆರವು ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿರುವುದಕ್ಕೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಕಳೆದ ಜುಲೈ ಮಾಹೆಯಲ್ಲಿ ಅಭಿನಂದನಾ ಪತ್ರ ಕಳುಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್