ಸೆಪ್ಟೆಂಬರ್‌ನಲ್ಲಿ ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಲೋಕಾರ್ಪಣೆ : ಡಾ. ಶರಣಪ್ರಕಾಶ್‌ ಪಾಟೀಲ್‌
ಬೆಂಗಳೂರು, 14 ಆಗಸ್ಟ್ (ಹಿ.ಸ.) : ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ನಾಗರಿಕರ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಸಚಿವರು ಈ ಮಾಹಿತಿ ನೀಡಿದ್ದು, 43
Patil


ಬೆಂಗಳೂರು, 14 ಆಗಸ್ಟ್ (ಹಿ.ಸ.) :

ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ನಾಗರಿಕರ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಸಚಿವರು ಈ ಮಾಹಿತಿ ನೀಡಿದ್ದು, 433.94 ಕೋಟಿ ರೂ. ವೆಚ್ಚದಲ್ಲಿ ಈ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಮಂಜೂರಾತಿ ನೀಡಿ ಕಾಮಗಾರಿ ಆರಂಭಿಸಲಾಗಿತ್ತು. ಅದೀಗ ಶೇಕಡ 95ರಷ್ಟು ಪೂರ್ಣಗೊಂಡಿದ್ದು, ಉಳಿದ ಸಣ್ಣಪುಟ ಕೆಲಸಗಳು ಮುಂದಿನ ಕೆಲವೇ ದಿನಗಳಲ್ಲಿ ಮುಗಿಯಲಿದೆ ಎಂದರು.

ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಈ ವೈದ್ಯಕೀಯ ಕಾಲೇಜಿನ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈಗಾಗಲೇ ನೀಡಿರುವ ಉತ್ತರದಲ್ಲಿ ಸ್ಪಷ್ಟಪಡಿಸಿದ್ದೇನೆ ಎಂದು ಸಚಿವರು ತಿಳಿಸಿದರು.

ಈಗಾಗಲೇ ಸ್ಥಳೀಯ ಶಾಸಕರೊಂದಿಗೆ ಎರಡು ಮೂರು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ಡಾ. ಪಾಟೀಲ್‌ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande