ವಿಜಯಪುರ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಾಳೆ ಆಗಸ್ಟ್ 15 ರಂದು ಜಿಲ್ಲಾಡಳಿತದಿಂದ ಆಚರಿಸುವ ಸ್ವಾತಂತ್ರ್ಯೋತ್ಸವದ ಆಚರಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಇಂದು ಸಂಜೆ ಜಿಲ್ಲಾದಿಕಾರಿ ಡಾ.ಆನಂದ.ಕೆ ಅವರು ಭೇಟ ನೀಡಿ,ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಉಪವಿಭಾಗಾಧಿಕಾರಿ ಗುರುನಾಥ್ ದಡ್ಡೆ,ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಿವೈ ಎಸ್ ಪಿ ಬಸವರಾಜ ಎಲಿಗಾರ, ಡಿಎಸ್‌ಪಿ ಡಿಎ ಆರ್ ಎಂ ಎ ಉಪಾಸೆ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ರಾಹುಲ್ ಕುಮಾರ್ ಭಾವಿದೊಡ್ಡಿ, ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಜಿಲಾಮಟ್ಟದ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande