ಸ್ವಾತಂತ್ರ್ಯ ದಿನಾಚರಣೆ : ಸಿದ್ದತೆ ಪರಿಶೀಲಿಸಿದ ಡಿಸಿ ಸಂಗಪ್ಪ
ವಿಜಯಪುರ, 14 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ 15 ರಂದು ಜರಗುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ
ಸ್ವಾತಂತ್ರ್ಯ ದಿನಾಚರಣೆ : ಸಿದ್ದತೆ ಪರಿಶೀಲಿಸಿದ ಡಿಸಿ ಸಂಗಪ್ಪ


ವಿಜಯಪುರ, 14 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ 15 ರಂದು ಜರಗುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು ಕಾರ್ಯಕ್ರಮದ ವೇದಿಕೆ ಹಾಗೂ ಇತರೆ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕಾರ್ಯಕ್ರಮ ಯಶಸ್ವಿ ಕುರಿತಂತೆ ಸೂಕ್ತ ನಿರ್ದೇಶನ ನೀಡಿದರು.

ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಲಿದ್ದು, ಇಲಾಖೆಯ ಸಿಬ್ಬಂದಿ ತಮ್ಮ ಸಿಬ್ಬಂದಿಗಳೊಂದಿಗೆ ಹಾಜರಿರಬೇಕು. ಅಲ್ಲದೇ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ ದಿನಾಚರಣೆ ಆಚರಿಸಿದ ನಂತರ ಸರಿಯಾದ ಸಮಯಕ್ಕೆ ಮಕ್ಕಳು ಜಿಲ್ಲಾ ಕ್ರೀಡಾಂಗಣಕ್ಕೆ ಕರೆತರುವ ವ್ಯವಸ್ಥೆ ಮಾಡಲು ತಿಳಿಸಿದರು.

ವೇದಿಕೆಯಲ್ಲಿ ಶಿಷ್ಟಾಚಾರದಂತೆ ಕಾರ್ಯಕ್ರಮ ನಿರ್ವಹಣೆಯಾಗಬೇಕು. ನೆರೆದ ಸಾರ್ವಜನಿಕರೆಲ್ಲರಿಗೂ ಕೂಡಲು ವ್ಯವಸ್ಥೆ ಮಾಡಬೇಕು. ಪ್ರತಿ ಕಾರ್ಯಕ್ರಮಗಳು ನಿಗದಿಪಡಿಸಿದ ಸಮಯಕ್ಕೆ ಜರುಗುವಂತೆ ನಿಗಾ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅಧಿಕಾರಿಗಳಿಗೆ, ಸನ್ಮಾನಿತರಿಗೆ ಹಾಗೂ ಪತ್ರಕರ್ತರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಬೇಕು ಎಂದರು.

ಭೇಟಿ ಸಂದರ್ಭದಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande