ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ರಾಯಚೂರು, 14 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಒಳಪಡುವ ಉಪ ಜಾತಿಗಳವಾರು 2025-26ನೇ ಸಾಲಿನಲ್ಲಿ ಸಾಲ-ಸೌಲಭ್ಯಕ್ಕೆ ಅರ್ಹ ಫಲಾನುವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ


ರಾಯಚೂರು, 14 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಒಳಪಡುವ ಉಪ ಜಾತಿಗಳವಾರು 2025-26ನೇ ಸಾಲಿನಲ್ಲಿ ಸಾಲ-ಸೌಲಭ್ಯಕ್ಕೆ ಅರ್ಹ ಫಲಾನುವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ)ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸಲು ಇಚ್ಚಿಸುವ ಫಲಾಪೇಕ್ಷಿಗಳು ಸೇವಾ ಸಿಂದು ಅಪ್ಲಿಕೇಷನ್ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಸೆಂಟರ್‍ಗಳಲ್ಲಿ ಮಾತ್ರ ಅರ್ಜಿಯನ್ನು ನಿಗಮಗಳ ವೆಬ್‍ಸೈಟ್ ವಿಳಾಸ: https://sevasindhu.karnataka.gov.in/Sevasindhu/Kannada?ReturnUrl=%2F ಈ ನಲ್ಲಿ ಸೆಪ್ಟೆಂಬರ್ 10ರೊಳಗಾಗಿ ಸಲ್ಲಿಸಬಹುದಾಗಿದೆ.

ದಾಖಲಾತಿಗಳು: ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ, ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ (ಆಧಾರ ಸೀಡ್ ಆಗಿರುವ ಬ್ಯಾಂಕ್ ಖಾತೆ), ವಾಹನ ಪರವಾನಿಗಿ (ವಾಹನವಾಗಿದ್ದಲ್ಲಿ) ದರಪಟ್ಟಿ, ಪಹಾಣಿ ಉದ್ದೇಶ ಕೊಳವೆ ಬಾವಿಯಾಗಿದ್ದಲ್ಲಿ, ಸಣ ಅತೀ ಸಣ್ಣ ರೈತ ಪ್ರಮಾಣ ಪತ್ರ (ಉದ್ದೇಶ ಕೊಳವೆ ಬಾವಿಯಾಗಿದ್ದಲ್ಲಿ) ದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸೂಚನೆ: 2023-24 ಮತ್ತು 2024-25 ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ ರಾಯಚೂರು ಜಿಲ್ಲೆ ನವಯುಗ ಕಾಲೇಜು ಹತ್ತಿರ, ಡ್ಯಾಡಿ ಕಾಲೋನಿ ಲಿಂಗಸೂಗೂರು ರೋಡ್ ರಾಯಚೂರು-584101ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande