ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕೊಪ್ಪಳ, 14 ಆಗಸ್ಟ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಆಗಸ್ಟ್ 15 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಆ.14
ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ


ಕೊಪ್ಪಳ, 14 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಆಗಸ್ಟ್ 15 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸಚಿವರು ಆ.14 ರಂದು ಬೆಂಗಳೂರಿನಿಂದ ರಸ್ತೆಯ ಮೂಲಕ ನಿರ್ಗಮಿಸಿ, ರಾತ್ರಿ 9.30ಕ್ಕೆ ಕೊಪ್ಪಳ ಜಿಲ್ಲೆಯ ಕಾರಟಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಆ. 15 ರಂದು ಬೆಳಿಗ್ಗೆ 7 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ, 8.30ಕ್ಕೆ ಕೊಪ್ಪಳಕ್ಕೆ ಆಗಮಿಸಿ ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ 79ನೇ ಸ್ವಾತಂತ್ರ್ಯ ದಿನಾಚಾರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ನಂತರ 10 ಗಂಟೆಗೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಛೇರಿ ಆವರಣದಲ್ಲಿನ ಸಸ್ಯಸಂತೆ ಹಾಗೂ ತೋಟಗಾರಿಕೆ ಅಭಿಯಾನ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸುವರು.

ಬಳಿಕ ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅಂದು ಸಂಜೆ 4 ಗಂಟೆಗೆ ಕೊಪ್ಪಳದಿಂದ ಇಳಕಲ್ ಕಡೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande