ಕೊಪ್ಪಳ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ತಾಲೂಕು ಪಂಚಾಯತಿ ಸಾಮಾನ್ಯ ಸಭೆಯನ್ನು ಆಗಸ್ಟ 19 ರಂದು ಬೆಳಿಗ್ಗೆ 10.30 ಗಂಟೆಗೆ ತಾ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ತಾಲೂಕ ಪಂಚಾಯತ್ ಆಡಳಿತಾಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ತಾಲೂಕು ಮಟ್ಟದ ಎಲ್ಲಾ ಅನುಷ್ಠಾನಧಿಕಾರಿಗಳು ಪ್ರಸಕ್ತ ಸಾಲಿನ ಏಪ್ರಿಲ್ 1 ರಿಂದ ಜುಲೈ 31ರ ವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಪ್ರತಿನಿಧಿಗಳನ್ನು ಕಳುಹಿಸದೇ ತಪ್ಪದೇ ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್