ಕೊಪ್ಪಳ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ತಾಲೂಕು ಪಂಚಾಯತ್ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳು ಸೇರಿದಂತೆ 2025-26ನೇ ಸಾಲಿನ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಆಗಸ್ಟ 25 ರಂದು ಬೆಳಿಗ್ಗೆ 10 ಗಂಟೆಗೆ ತಾ.ಪಂ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಅನಿವಾರ್ಯ ಕಾರಣಗಳಿಂದ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಶಾಸಕರ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್