ಹೊಸಪೇಟೆ , 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕಿರ್ಲೋಸ್ಕರ್ ಕಾರ್ಖಾನೆಯ ದಿನಗೂಲಿ ನೌಕರನಾಗಿದ್ದ ಶ್ರೀನಾಥ ಎಂಬ ವ್ಯಕ್ತಿ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ವಾಪಸ್ಸು ಬಾರದೆ ಕಾಣೆಯಾಗಿದ್ದು, ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಗುರುತು : 5.5 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಕಪ್ಪು ಮೈಬಣ್ಣ ಮತ್ತು ಬಲ ಕೈನಲ್ಲಿ ಎಸ್‍ಪಿ ಎಂದು ಇಂಗ್ಲೀಷ್ ಅಕ್ಷರಗಳನ್ನು ಹಚ್ಚೆ ಹಾಕಿಸಿಕೊಂಡಿರುತ್ತಾನೆ. ಮನೆಯಿಂದ ಹೋಗುವಾಗ ಗ್ರೇ ಬಣ್ಣದ ಪ್ಯಾಂಟ್ ಮತ್ತು ನೀಲಿ ಬಣ್ಣದ ಗೀರುಗಳುಳ್ಳ ಕಾಟನ್ ಶರ್ಟ್ ಧರಿಸಿರುತ್ತಾರೆ. ಇವರು ಕನ್ನಡ ಭಾμÉ ಮಾತನಾಡುತ್ತಾರೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಮೊ.9480805769ಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್