ಕೊಪ್ಪಳ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ ನಿಯಮಿತ (ಕೆ.ವಿ.ಟಿ.ಎಸ್.ಡಿ.ಸಿ) ವತಿಯಿಂದ ಆಗಸ್ಟ್ 17 ರಂದು ಬೆಂಗಳೂರಿನ ದಿ ಲಲಿತ್ ಅಶೋಕ ಹೋಟೆಲ್‍ನಲ್ಲಿ ಏರ್ಪಡಿಸಲಾಗಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮದ ಪೆÇೀಸ್ಟ್-ಗಳನ್ನು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ, ಮುಖಂಡರಾದ ನಜೀರಸಾಬ್ ಮೂಲಿಮನಿ, ಮೆಹಬೂಬ್ ಪಾμÁ ಮಾನ್ವಿ, ಎಂ.ಡಿ ಸಿರಾಜ್ ಸಿದ್ದಾಪುರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್