ಹುಬ್ಬಳ್ಳಿ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಮಾಯಕ ಹೆಣ್ಣುಮಗಳಿಗೆ ನ್ಯಾಯ ಕೊಡಿಸುವ ನೆಪದಲ್ಲಿ, ವಿರೋಧಿಗಳು ಷಡ್ಯಂತ್ರ ರೂಪಿಸಿ ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ತೇಜೋವಧೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ದುರುದ್ದೇಶಿತ ಕೃತ್ಯಗಳ ವಿರುದ್ಧವಾಗಿ ಆಗಷ್ಟ್ ೧೭ರಂದು ಭಾರೀ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಯನ್ನು ಆಯೋಜಿಸಲಾಗಿದೆ ಎಂದು ಸುಕ್ಷೇತ್ರ ಧರ್ಮಸ್ಥಳ ಸಂರಕ್ಷಣಾ ಸಮಿತಿ ಸಂಚಾಲಕ ಸುಭಾಸ ಸಿಂಗ್ ಜಮಾದಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರವಿವಾರ, ದಿನಾಂಕ 17-08-2025, ಸಂಜೆ 5.00 ಗಂಟೆಗೆ, ಹುಬ್ಬಳ್ಳಿಯ ಸ್ಟೇಷನ್ ರಸ್ತೆಯ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆವಆರಂಭವಾಗಲಿದ್ದು, ನಂತರ ಸಂಜೆ 6.30 ಗಂಟೆಗೆ ಇಂದಿರಾ ಗಾಜಿನಮನೆಯಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.
ಸಭೆಯಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಅನೇಕ ಸಂಘ-ಸಂಸ್ಥೆಗಳು ಈ ಹೋರಾಟಕ್ಕೆ ತಮ್ಮ ಬೆಂಬಲವನ್ನು ಘೋಷಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa