ನವದೆಹಲಿ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮತ್ತು ಮತ ಕಳ್ಳತನ ವಿರುದ್ಧ ಕಾಂಗ್ರೆಸ್ ಆಯೋಜಿಸಿರುವ ಮತದಾರರ ಹಕ್ಕುಗಳ ಯಾತ್ರೆ ಆಗಸ್ಟ್ 17ರಂದು ಗಯಾದಿಂದ ಆರಂಭವಾಗಿ ಆಗಸ್ಟ್ 30ರಂದು ಅರಾದಲ್ಲಿ ಮುಕ್ತಾಯಗೊಳ್ಳಲಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾಗವಹಿಸಲಿದ್ದಾರೆ.
ಈ ಕುರಿತು ಎಕ್ಸನಲ್ಲಿ ಮಾಹಿತಿ ಹಂಚಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ , ಈ ಯಾತ್ರೆ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜನರ ಹಕ್ಕುಗಳ ರಕ್ಷಣೆಗೆ ಮಹತ್ವದ ಹೆಜ್ಜೆ. ಯಾತ್ರೆಯ ನಂತರ, ಸೆಪ್ಟೆಂಬರ್ 1ರಂದು ಪಾಟ್ನಾದಲ್ಲಿ ಮಹಾರ್ಯಾಲಿ ನಡೆಯಲಿದ್ದು, ಮತ ಕಳ್ಳತನವನ್ನು ತಡೆಗಟ್ಟುವ ಸಂದೇಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa