ಉಡುಪಿ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ನ್ಯಾಯಾಲಯದ ತೀರ್ಪಿಗೆ ಎಲ್ಲರು ಎಲ್ಲರೂ ತಲೆಬಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಏಳು ಸಹಚರರ ಜಾಮೀನು ರದ್ದುಗೊಳಿಸಿದ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ನ್ಯಾಯಾಲಯ ತೀರ್ಪು ಕೊಟ್ಟ ನಂತರ ನಾವೆಲ್ಲರೂ ಅದಕ್ಕೆ ತಲೆಬಾಗಲೇಬೇಕು. ಸಂವಿಧಾನದಲ್ಲಿ ವಿಶ್ವಾಸ ಇರಿಸಿಕೊಂಡಿರುವ ನಾವೆಲ್ಲರೂ ತೀರ್ಪಿಗೆ ತಲೆಬಾಗಲೇಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa