ಗದಗ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗದಗ ತಾಲೂಕಿನ ಕೆ.ವಿ.ವಿ.ಎಸ್.ಜೆ.ಪಿ, ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿಯಾದ 05 ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಕಾರ್ಯಕ್ರಮವನ್ನು ಹಮಿಕೊಂಡಿದ್ದು ಸದರಿ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ 2025-26ನೇ ಸಾಲಿನ ನೋಂದಣಿ ಪ್ರಕ್ರಿಯೆ ಆರಂಭವಾಗಿರುವ ಪೋಸ್ಟರ್‌ನ್ನು ಅನಾವರಣಗೊಳಿಸಲಾಯಿತು ಹಾಗೂ ಕಾರ್ಯಕ್ರಮದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗದಗ ಇವರಿಂದ ನೀಡಲಾಯಿತು.
ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಿ,ಬಿ,ಅಸೂಟಿ, ಇವರ ಅಧ್ಯಕ್ಷತೆಯಲ್ಲಿ ಯುವನಿಧಿ ಯೋಜನೆಯ ಪ್ರಚಾರ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮನ್ನು ಹಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ, ಗದಗ ಹಾಗೂ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಕೃಷ್ಣಗೌಡ ಎಚ್ ಪಾಟೀಲ, ಜೆ.ಪಿ, ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ, ಶ್ರೀಮತಿ, ವಿಜಯಲಕ್ಷೀ್ಮ ಹಿರೇಗೌಡರ, ಜಿಲ್ಲಾ ಉದ್ಯೋಗಾಧಿಕಾರಿಗಳಾದ ಬಸವಂತ್.ಪಿ.ಎನ್ ಮತ್ತು ಆಪ್ತ ಸಮಾಲೋಚಕರಾದ ಆನಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು,
ಯುವ ನಿಧಿ ಯೋಜನೆಯು ಕರ್ನಾಟಕದ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ಒದಗಿಸುತ್ತಿದ್ದು. ಪದವೀಧರರು ತಿಂಗಳಿಗೆ 3,000 ಮತ್ತು ಡಿಪ್ಲೊಮಾ ಹೊಂದಿರುವವರು 1,500 . ನಿರುದ್ಯೋಗ ಭತ್ಯೆಯನ್ನು ಕೊಡುತ್ತಿದ್ದು 2023ರಿಂದ ಪದವಿ ಅಥವಾ ಡಿಪ್ಲೊಮಾ ಪಡೆದಿರಬೇಕು ಮತ್ತು ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಕನಿಷ್ಠ ಆರು ತಿಂಗಳ ಕಾಲ ನಿರುದ್ಯೋಗಿಗಳಾಗಿರಬೇಕು. ನಿರುದ್ಯೋಗ ಭತ್ಯೆಯನ್ನು ಗರಿಷ್ಠ ಎರಡು ವರ್ಷಗಳವರೆಗೆ. ನೀಡಲಾಗುತ್ತದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದು.
ಹಿಂದೂಸ್ತಾನ್ ಸಮಾಚಾರ್ / lalita MP