ಬಳ್ಳಾರಿ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಭಾರತದ 79ನೇ ಸ್ವತಂತ್ರೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿತು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಜ್ ನಾಗಿರೆಡ್ಡಿ, ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೇಶಕ್ಕೆ ಸ್ವಾತಂತ್ರ ತಂದು ಕೊಡಲು ಸರದಾರ ವಲ್ಲಬಾಯಿ ಪಟೇಲ್, ಸುಭಾಶ್ ಚಂದ್ರ ಬೋಸ್, ಬಾಲಗಂಗಾಧರ ತಿಲಕ್, ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿ ಅನೇಕ ಮಹನೀಯರು ಶ್ರಮಿಸಿದ್ದಾರೆ ಎಂದು ಸ್ವಾತಂತ್ರ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದರು.
ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು, ಎಲ್ಲಾ ಸ್ವಾತಂತ್ರ ಹೋರಾಟಗಾರರ ತ್ಯಾಗ-ಬಲಿದಾನದ ಸ್ಮರಣೆಯೇ ಸ್ವಾತಂತ್ರೋತ್ಸವದ ಆಚರಣೆಯಾಗಿದೆ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷರಗಳಾದ, ಕೆ. ಚೆನ್ನಪ್ಪ, ಜೆ. ನಾಗೇಶ್, ಡಾ. ರಮೇಶ ಗೋಪಾಲ್, ಜೆ. ಸತ್ಯನಾರಾಯಣ, ನಿಕಟಪೂರ್ವಅಧ್ಯಕ್ಷರಾದ ಬಿ. ಮಹಾರುದ್ರಗೌಡ, ಹಿರಿಯ ಉಪಾಧ್ಯಕ್ಷರಾದ ಅವ್ವಾರು ಮಂಜುನಾಥ, ಉಪಾಧ್ಯಕ್ಷರುಗಳಾದ ಎಸ್. ದೊಡ್ಡನಗೌಡ, ಸೊಂತ ಗಿರಿಧರ್, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ರಾಷ್ಟ್ರಧ್ವಜಾರೋಹಣದಲ್ಲಿ ಪಾಲ್ಗೊಂಡು ಭಾರತಾಂಬೆಗೆ ಗೌರವ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್