ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 79 ನೇ ಸ್ವಾತಂತ್ರ್ಯೋತ್ಸವ
ಬಳ್ಳಾರಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಪ್ರಾಣ ತ್ಯಾಗ ಬಲಿದಾನ ಮಾಡಿದ್ದಾರೆ. ಅವರನ್ನು ಸ್ಮರಿಸಿ ಗೌರವ ಸಲ್ಲಿಸೋಣ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು
ಬಳ್ಳಾರಿ : ಜಿಲ್ಲಾ ನ್ಯಾಯಾಲಯದಲ್ಲಿ 79 ನೇ ಸ್ವಾತಂತ್ರ್ಯೋತ್ಸವ


ಬಳ್ಳಾರಿ : ಜಿಲ್ಲಾ ನ್ಯಾಯಾಲಯದಲ್ಲಿ 79 ನೇ ಸ್ವಾತಂತ್ರ್ಯೋತ್ಸವ


ಬಳ್ಳಾರಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಪ್ರಾಣ ತ್ಯಾಗ ಬಲಿದಾನ ಮಾಡಿದ್ದಾರೆ. ಅವರನ್ನು ಸ್ಮರಿಸಿ ಗೌರವ ಸಲ್ಲಿಸೋಣ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಹೇಳಿದ್ದಾರೆ.

ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಬಳಿಕ ಅವರು ಮಾತನಾಡಿದರು.

ಈ ದಿನ ಸಂಭ್ರಮದ ಹಬ್ಬವನ್ನಾಗಿ ಆಚರಿಸುವುದರ ಹಿಂದೆ ದೇಶದ ಸ್ವಾತಂತ್ರ್ಯಕ್ಕಾಗಿ ಮಡಿದ ಮಹಾತ್ಮ ಗಾಂಧಿ, ಡಾ.ಬಿರ್.ಆರ್.ಅಂಬೇಡ್ಕರ್, ಸುಭಾμï ಚಂದ್ರ ಬೋಸ್, ಸರ್ದಾರ್ ವಲ್ಲಭಾಯ್ ಪಾಟೀಲ್, ಜವಾಹರ್‍ಲಾಲ್ ನೆಹರು, ಲಾಲ್ ಬಹುದ್ದೂರ್ ಶಾಸ್ತ್ರೀ, ಲಾಲ್ ಲಜಪತ್ ರಾಯ್, ಭಗತ್ ಸಿಂಗ್, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಸರೋಜಿನಿ ನಾಯ್ಡು, ಮತ್ತು ಹಲವಾರು ಮಹಿನೀಯರ ಶ್ರಮವಿದೆ ಎಂದು ತಿಳಿಸಿದರು.

ಇಂದು ದೇಶಕ್ಕಾಗಿ ಹೋರಾಡಿದ ಎಲ್ಲಾ ಹಿರಿಯರನ್ನು ಸ್ಮರಿಸಿ, ಅವರ ತ್ಯಾಗ, ಬಲಿದಾನ, ಸಾಧನೆಯ ಮಾರ್ಗದರ್ಶನವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಸ್ತುತ ಭಾರತ ದೇಶವು ಆರ್ಥಿಕತೆ, ವೈದ್ಯಕೀಯ, ವೈಜ್ಞಾನಿಕ, ಶಿಕ್ಷಣ, ಕ್ರೀಡೆ, ಉದ್ಯಮ, ತಾಂತ್ರಿಕತೆ, ಕೃಷಿ, ಬಲಿಷ್ಠ ಸೇನಾ ಪಡೆ, ಸೇವಾ ವಲಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದಿದ್ದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ನಮ್ಮ ದೇಶವು ಸದೃಢ ರಾಷ್ಟ್ರವಾಗಿದ್ದು, ನೆರೆ ಹೊರೆ ದೇಶದ ದಾಳಿಯಿಂದ ಹೋರಾಡಲು ಬಲಿಷ್ಠವಾದ ಭಾರತೀಯ ಸೇನೆ ಪಡೆ, ವಾಯು ಸೇನೆ ಪಡೆ, ನೌಕಾ ಪಡೆಯನ್ನು ಹೊಂದಿದೆ. ನಾವೆಲ್ಲರೂ ಸುರಕ್ಷಿತವಾಗಿರಲು ಇವರ ಶ್ರಮ ಅಪರವಾಗಿದ್ದು, ಇತ್ತಿಚೇಗೆ ನಡೆದ ಪಹಲ್ಗಾಂ ದಾಳಿಯ ಪ್ರತೀಕಾರವನ್ನು ಅತಿ ವೇಗದಲ್ಲಿ ಆಪರೇಷನ್ ಸಿಂಧೂರ ಎಂಬ ಆಪರೇಷನ್ ಮೂಲಕ ದಾಳಿ ನಡೆಸಿದ ಭಾರತೀಯ ಸೇನೆಯಿಂದ ನಮ್ಮ ದೇಶಕ್ಕೆ ಹೆಮ್ಮಯ ವಿಷಯವಾಗಿದೆ ಎಂದು ಸ್ಮರಿಸಿದರು.

ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ. ರಾಮಬ್ರಹ್ಮ ಸೇರಿದಂತೆ ನ್ಯಾಯಾಲಯದ ನ್ಯಾಯಧೀಶರು, ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾವಾದಿಗಳು, ಸಿಬ್ಬಂದಿ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande