ಬಳ್ಳಾರಿ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ, ಯಶೋಗಾಥೆಯ ಇತಿಹಾಸವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂದು ವಿಎಸ್‍ಕೆಯುನ ಕುಲಸಚಿವ ಸಿ. ನಾಗರಾಜು ಅವರು ತಿಳಿಸಿದ್ದಾರೆ.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣವನ್ನು ಕುಲಪತಿಗಳೊಂದಿಗೆ ನೆರವೇರಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಎಂ ಮುನಿರಾಜು ತಮ್ಮ ಅಧ್ಯಕ್ಷತೆವಹಿಸಿದ್ದರು.
ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಎಂ.ಸಾಲಿ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಶಶಿಧರ್ ಕೆಲ್ಲೂರ್, ಡಾ.ಸಂಪತ್ ಕುಮಾರ್ ಹಾಗೂ ಸಿಬ್ಬಂದಿಗಳು – ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್