ರಾಯಚೂರು, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಗಸ್ಟ್ 15ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 228ನೇ ಜಯಂತ್ಯುತ್ಸವ ಆಚರಣೆ ನಡೆಯಿತು.
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಇದೆ ವೇಳೆಯಲ್ಲಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೌರವ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ನಸೀರ್ ಅಹ್ಮದ್, ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್