ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ದಾಳಿ ಪ್ರಕರಣ :೧ ಕೋಟಿಗೂ ಅಧಿಕ ನಗದ, ಚಿನ್ನಾಭರಣ ವಶ
ಬೆಂಗಳೂರು, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿರುವ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಮತ್ತು ಇತರರ ವಿರುದ್ಧ ನಡೆಯುತ್ತಿರುವ ತನಿಖೆಯ
Ed


ಬೆಂಗಳೂರು, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿರುವ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಮತ್ತು ಇತರರ ವಿರುದ್ಧ ನಡೆಯುತ್ತಿರುವ ತನಿಖೆಯ ಅಂಗವಾಗಿ, ಬೆಂಗಳೂರು ವಲಯ ಜಾರಿ ನಿರ್ದೇಶನಾಲಯ ಆಗಸ್ಟ್‌ 13 ಮತ್ತು 14ರಂದು ಅಕ್ರಮ ಹಣಕಾಸು ವರ್ಗಾವಣೆ ತಡೆ ಕಾಯ್ದೆಯಡಿ ಭಾರಿ ಶೋಧ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ನಗದು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರವಾರ , ಗೋವಾ, ಮುಂಬೈ ಹಾಗೂ ನವದೆಹಲಿಯ ಅನೇಕ ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ, ಅಪರಾಧಕ್ಕೆ ಸಂಬಂಧಿಸಿದ ಹಲವು ದಾಖಲೆಗಳು, ಇ-ಮೇಲ್‌ಗಳು ಮತ್ತು ಇತರ ಪ್ರಮುಖ ಸಾಕ್ಷ್ಯಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳಲಾಗಿದೆ.

ಇದೇ ವೇಳೆ ₹ 1.68 ಕೋಟಿ ನಗದು, 6.75 ಕೆಜಿ ಚಿನ್ನಾಭರಣ

ಬ್ಯಾಂಕ್‌ ಖಾತೆಗಳಲ್ಲಿ ₹ 14.13 ಕೋಟಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದ ಜಾರಿ ನಿರ್ದೇಶನಾಲಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande