ಬಳ್ಳಾರಿ ಜಿಲ್ಲಾ ಜೆಡಿಎಸ್‌ ಕಚೇರಿ ಆವರಣದಲ್ಲಿ ಧ್ವಜಾರೋಹಣ
ಬಳ್ಳಾರಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಾರತದ 79ನೇ ಸ್ವತಂತ್ರೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾ ಜೆಡಿಎಸ್‌ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿತು. ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷರಾದ ಮೀನಹಳ್ಳಿ ತಾಯಣ್ಣ ರವರು ನೆರವೇರಿಸಿ, ರಾಷ್ಟ್ರ
ಬಳ್ಳಾರಿ ಜಿಲ್ಲಾ ಜೆಡಿಎಸ್‌ ಕಚೇರಿಯ ಆವರಣದಲ್ಲಿ ಧ್ವಜಾರೋಹಣ


ಬಳ್ಳಾರಿ ಜಿಲ್ಲಾ ಜೆಡಿಎಸ್‌ ಕಚೇರಿಯ ಆವರಣದಲ್ಲಿ ಧ್ವಜಾರೋಹಣ


ಬಳ್ಳಾರಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಭಾರತದ 79ನೇ ಸ್ವತಂತ್ರೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾ ಜೆಡಿಎಸ್‌ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿತು. ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷರಾದ ಮೀನಹಳ್ಳಿ ತಾಯಣ್ಣ ರವರು ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಸ್ವಾತಂತ್ರ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದರು.

ಮೀನಳ್ಳಿ ತಾಯಣ್ಣ ಅವರು, ದೇಶಕ್ಕೆ ಸ್ವಾತಂತ್ರ ತಂದು ಕೊಡಲು ಸುಭಾಶ್ ಚಂದ್ರ ಬೋಸ್, ಬಾಲಗಂಗಾಧರ ತಿಲಕ್, ಲಾಲ್ ಬಹದ್ದೂ‌ರ್ ಶಾಸ್ತ್ರಿ, ಬಿ.ಆರ್.ಅಂಬೇಡ್ಕರ್ ಸೇರಿ ಅನೇಕ ಮಹನೀಯರು ಶ್ರಮಿಸಿದ್ದಾರೆ. ಎಲ್ಲಾ ಸ್ವಾತಂತ್ರ ಹೋರಾಟಗಾರರ ತ್ಯಾಗ-ಬಲಿದಾನದ ಸ್ಮರಣೆಯೇ ಸ್ವಾತಂತ್ರೋತ್ಸವದ ಜೂನ್ 3, 1947 ರಂದು ಆಗಿನ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್‌ಬ್ಯಾಟನ್ ಅವರು ಭಾರತವನ್ನು ಬ್ರಿಟೀಷ್ ಕಪಿಮುಷ್ಠಿಯಿಂದ ಸ್ವತಂತ್ರಗೊಳಿಸಿದರು ಎಂದು ಆಚರಣೆಯಾಗಿದೆ ಎಂದರು.

ಬಳ್ಳಾರಿ ಜೆಡಿಎಸ್ ಬಳ್ಳಾರಿ ಗ್ರಾಮೀಣ ಘಟಕದ ಅಧ್ಯಕ್ಷ ಅಶೋಕ್ ಸಂಗನಕಲ್ಲು, ರಾಮಾಂಜೀನಿ, ಬಸಪ್ಪ, ಮುತ್ತು, ಪ್ರದೀಪ್, ನಾಗರಾಜ,ಹೊನ್ನೂರು ವಾಲಿ, ಪ್ರಭಾಕರ ರೆಡ್ಡಿ,ಮಹಿಳಾ ಅಧ್ಯಕ್ಷೆಯಾದ ಪುಷ್ಪಾ, ವಿಜಯ,ರಮಾಮೂತಿ೯, ರೇಷ್ಮಾ,ವೃಂದಾವನಿ, ಮತ್ತು ಇತರ ಕಾಯ೯ಕತ೯ರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande