ದೇವದುರ್ಗ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ದೇವದುರ್ಗ ಪಟ್ಟಣದ ಬಾಬು ಜಗಜೀವನ್ ರಾಮ್ ಭವನದಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.
ಗೌರವಾನ್ವಿತ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಮತ್ತು ದೇವದುರ್ಗ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರಫಿಕ್ ಅಹ್ಮದ್ ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲಿ ಶಿಕ್ಷಣವು ಅಭಿವೃದ್ಧಿ ವಿಷಯಕ್ಕಾಗಿ ಅತ್ಯಂತ ಪ್ರಧಾನವಾಗಿದೆ. ಆದ್ದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗದ ಹಾಗೆ ಉತ್ತಮ ಶಿಕ್ಷಣ ಕೊಡಬೇಕು. ಶಿಕ್ಷಣದಿಂದ ಮಾತ್ರ ಮಕ್ಕಳು ಬದುಕಿನಲ್ಲಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಹೇಳಿದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ ಅವರು ಮಾತನಾಡಿ, 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 14 ವರ್ಷ ಮೇಲ್ಪಟ್ಟು 18 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಅಪಾಯಕಾರಿ ವೃತ್ತಿ ಮತ್ತು ಪ್ರಕ್ರಿಯೆಗಳಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಅಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ತಪ್ಪಿತಸ್ಥ ಮಾಲೀಕರ ವಿರುದ್ಧ ಸಂಬ0ಧ ಪಟ್ಟ ಪೊಲೀಸ್ ಠಾಣೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ-2016ರಡಿ ಪ್ರಕರಣ ದಾಖಲಿಸಲಾಗುವುದು. ದುಡಿಯುವ ಮಕ್ಕಳು ಎಲ್ಲಿಯಾದರೂ ಕಂಡು ಬ0ದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ: 1098/112ಗೆ ಉಚಿತವಾಗಿ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.
ಈ ವೇಳೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪನ್ಯಾಸರಾಗಿ ವಕೀಲರಾದ ಮರಿಲಿಂಗಪ್ಪ ಕೋಳುರು ಅವರು ಮಾತನಾಡಿ, ಜನತಾ ನ್ಯಾಯಾಲಯದ ಮಹತ್ವವನ್ನು ತಿಳಿಸಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು
ಇದೇ ಸಂದರ್ಭದಲ್ಲಿ ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶುಕುಮುನಿ ರೆಡ್ಡಿ, ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ, ತಾಲೂಕು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾದ ವಸಂತ್ ಕುಮಾರ.ಬಿ ಮತ್ತು ಗಂಗಮ್ಮ ಬೀಮೋಜಿ, ಆರಕ್ಷಕ ನಿರೀಕ್ಷಕರಾದ ಮಂಜುನಾಥ.ಎಸ್, ಅಕ್ಷರ ದಾಸೋಹ ತಾಲೂಕ ಪಂಚಾಯತ್ ಸಹಾಯಕ ನಿರ್ದೇಶಕರಾದ ಬಸವರಾಜ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಇ.ಸಿ.ಓ ರಾಜನಗೌಡ, ಸಮಾಜ ಕಲ್ಯಾಣ ಇಲಾಖೆಯ ಶಿವಕುಮಾರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಭಾಗಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾರ್ಯಾಲಯದ ಶ್ರೀದೇವಿ, ದೇವದುರ್ಗ ಪಟ್ಟಣದ ಸಿ.ಆರ್.ಪಿ ಮಹಾದೇವ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೇರಬಂಡಿ ಮುಖ್ಯಗುರುಗಳಾದ ಬೋರೆಗೌಡ, ಮಕ್ಕಳ ರಕ್ಷಣ ಘಟಕದ ತಿಕ್ಕಯ್ಯ, ಕಾರ್ಮಿಕ ಇಲಾಖೆಯ ಹುಸೇನ್ ನಾಯ್ಕ, ಮಾರ್ಗದರ್ಶಿ ಸಂಸ್ಥೆಯ ರವೀಂದ್ರ, ಡಾನ್ ಬೋಸ್ಕೋ ಸಮಾಜ ಸೇವಾ ಸಂಸ್ಥೆಯ ಬಸವರಾಜ ಮೇತ್ರಿ ಹಾಗೂ ಸ್ಥಳೀಯ ನಿವಾಸಿಗಳು ಮತ್ತು ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್