ಬಳ್ಳಾರಿ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ನೂತನ ಖಜಾಂಚಿಯಾಗಿ ಬಳ್ಳಾರಿಯ ಎಚ್. ತಿಮ್ಮನಗೌಡ ಅವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ರಾಜ್ಯ ಗೌರವಾಧ್ಯಕ್ಷರಾಗಿ ಲೋಕಿಕೆರೆ ನಾಗರಾಜ್, ರಾಜ್ಯಾಧ್ಯಕ್ಷರಾಗಿ ಬಸವನಗೌಡ ಮಾಲಿಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಟಿ. ಮಹಾಂತೇಶ್ ಆಯ್ಕೆಯಾಗಿದ್ದಾರೆ.
ಎಚ್. ತಿಮ್ಮನಗೌಡ ಅವರು ಬಳ್ಳಾರಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ಮತ್ತು ಬಳ್ಳಾರಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್