ಹೊಸಪೇಟೆ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ‘ಅಕ್ಕ ಕೆಫೆ ಮತ್ತು ಸಂಚಾರಿ ಅಕ್ಕ ಕೆಫೆ’ ಉದ್ಘಾಟನೆಯನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ನೆರವೇರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಅಡಿಯಲ್ಲಿ ನಿರ್ಮಿಸಿರುವ ಅಕ್ಕ ಕೆಫೆ ಮತ್ತು ಸಂಚಾರಿ ಅಕ್ಕ ಕೆಫೆಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಕೆಫೆಯಲ್ಲಿನ ಉಪಹಾರಗಳನ್ನು ಸೇವಿಸಿದರು.
ಈ ವೇಳೆ ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ್ ನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಹಡಗಲಿ ಶಾಸಕ ಕೃಷ್ಣನಾಯ್ಕ, ಹುಡಾ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಸೇರಿದಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ನೋಂಗ್ಜಯ್ ಮೊಹಮ್ಮದ್ ಅಕ್ರಮ್ ಅಲಿ ಶಾ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್