ರಾಯಚೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ
ರಾಯಚೂರು, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಯಚೂರು ಜಿಲ್ಲಾ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಅಧ್ಯಕ್ಷರಾದ ವೀರನಗೌಡ ಪಾಟೀಲ್ ಲೆಕ್ಕಿಹಾಳ್ ಅವರು ನೆರವೇರಿಸಿದ್ದಾರೆ. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎನ್.ಶಂಕ್ರಪ್ಪ ಅವರು, ನಾವು ಇಂದು 79ನೇ ಸ್ವ
ರಾಯಚೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಜೃಂಭಣೆಯಿಂದ ಸ್ವತಂತ್ರ್ಯ ದಿನಾಚರಣೆ


ರಾಯಚೂರು, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಯಚೂರು ಜಿಲ್ಲಾ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಅಧ್ಯಕ್ಷರಾದ ವೀರನಗೌಡ ಪಾಟೀಲ್ ಲೆಕ್ಕಿಹಾಳ್ ಅವರು ನೆರವೇರಿಸಿದ್ದಾರೆ.

ಮಾಜಿ ವಿಧಾನ ಪರಿಷತ್ ಸದಸ್ಯರಾದ ಎನ್.ಶಂಕ್ರಪ್ಪ ಅವರು, ನಾವು ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸೇರಿದ್ದೇವೆ. ಭಾರತದ ಸ್ವಾತಂತ್ರ್ಯ ದಿನವೂ ಎಲ್ಲಾ ಭಾರತಿಯ ನಾಗರಿಕರಿಗೆ ಅತ್ಯಂತ ಮಹತ್ವದ ದಿನವಾಗಿದೆ. ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಹಲವು ವರ್ಷಗಳ ಕಠಿಣ ಹೋರಾಟದ ನಂತರ ನಮಗೆ ಬ್ರಿಟಿಷ್ ಆಡಳಿತದಿಂದ ಸ್ವಾತಂತ್ರ್ಯ ದೊರಕಿತು ಎಂದು ಹೇಳಿದರು.

ಭಾರತದ ಸ್ವಾತಂತ್ರ್ಯಕ್ಕೆ 1857 ರಿಂದ 1947 ರವರೆಗೆ ಹಲವು ದಶಕಗಳ ಕಾಲ ನಮ್ಮ ಪೂರ್ವಜರು ಹೋರಾಡಿರುವುದನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಲೇಬೇಕು. ಅವರುಗಳಲ್ಲಿ ಸುಭಾಷ್ ಚಂದ್ರ ಬೋಸ್, ಮಹಾತ್ಮ ಗಾಂಧಿ, ಮಂಗಲ್ ಪಾಂಡೆ, ಭಗತ್ ಸಿಂಗ್, ಅವರ ತ್ಯಾಗವನ್ನು ನಾವು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಶಾಸಕ ಡಾ.ಶಿವರಾಜ್ ಪಾಟೀಲ್, ಮಾಜಿ ಶಾಸಕರಾದ ಬಸನಗೌಡ ಬ್ಯಾಗವಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಜಾಲ್ದಾರ್, ಶಂಕರ್ ರೆಡ್ಡಿ, ಸಂತೋಷ ರಾಜಗೂರು, ಮುಖಂಡರಾದ ಶಿವಬಸಪ್ಪ ಮಾಲಿಪಾಟೀಲ, ರಾಜಕುಮಾರ, ಕಡಗೋಲ ಅಂಜಿನೆಯ್ಯ, ತ್ರಿವಿಕ್ರಮ ಜೋಷಿ, ಗೋವಿಂದ, ಮಹಾನಗರ ಪಾಲಿಕೆ ಸದಸ್ಯರಾದ ಶಶಿರಾಜ್, ನರಸರೆಡ್ಡಿ, ಮಹಿಳಾ ಮೋರ್ಚಾದ ವಿಜಯರಾಜೇಶ್ವರಿ, ಸೀತಾ ನಾಯಕ್, ಸಾವಿತ್ರಿ ಸಾರಡ, ನಾಗವೇಣಿ, ರೂಪ ನಾಯಕ, ವಿಜಯಕುಮಾರ್ ಸಜ್ಜ‌ನ್, ವಿನಾಯಕ ರಾವ್, ಕೊಟ್ರೇಶ ಕೋರಿ ಹಾಗು ಪಕ್ಷದ ಪ್ರಮುಖರು ಕಾರ್ಯಕರ್ತರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande