ರಾಯಚೂರು, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರ ಕಾರ್ಯಾಲಯದಲ್ಲಿ ಆಗಸ್ಟ್ 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ಧಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಇದೆ ವೇಳೆ ನೆರದಿದ್ದ ಮುಖಂಡರು ಮತ್ತು ಅಭಿಮಾನಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು, ನಾಮ ನಿರ್ದೇಶಿತ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್