ರಾಯಚೂರು, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ನೂತನ ಜಿಲ್ಲಾಡಳಿತ ಭವನದಲ್ಲಿ ಆಗಸ್ಟ್ 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ನಸೀರ್ ಅಹ್ಮದ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ಅಶೋಕ, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರ ಸೂಗುರೇಶ ದೇಸಾಯಿ, ಸಿಬ್ಬಂದಿ ಮಲ್ಲೇಶ, ಪ್ರಕಾಶ್, ಅನೀಲ್ ಕುಲಕರ್ಣಿ ಸೇರಿದಂತೆ ಇತರರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್