ಕಲಬುರಗಿ ಶರಣಬಸವೇಶ್ವರ ಪೀಠಾಧಿಪತಿ ಅಂತ್ಯಕ್ರಿಯೆ ಇಂದು
ಕಲಬುರಗಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಳೆದ ರಾತ್ರಿ ಲಿಂಗೈಕ್ಯರಾದ ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪಾ (91) ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ವೀರಶೈವ ಲಿಂಗಾಯತ ಧರ್ಮದ ವಿಧಿವಿಧಾನಗಳಂತೆ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿರುವ ಪೀಠಾಧಿಪತಿಗಳ ಐಕ್ಯ ಸ
Sharan


ಕಲಬುರಗಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಳೆದ ರಾತ್ರಿ ಲಿಂಗೈಕ್ಯರಾದ ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪಾ (91) ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ವೀರಶೈವ ಲಿಂಗಾಯತ ಧರ್ಮದ ವಿಧಿವಿಧಾನಗಳಂತೆ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿರುವ ಪೀಠಾಧಿಪತಿಗಳ ಐಕ್ಯ ಸ್ಥಳದಲ್ಲಿ ನೆರವೇರಲಿದೆ.

ಭಕ್ತರಿಗೆ ಅನುಭವ ಮಂಟಪದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಗ್ಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ 7 ಗಂಟೆಗೆ ಇರಿಸಲಾಗಿದ್ದು, 2 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ.

ಅಪಾರ ಸಂಖ್ಯೆಯಲ್ಲಿ ಭಕ್ತರು , ಹಲವಾರು ರಾಜಕೀಯ ಗಣ್ಯರೂ ದರ್ಶನಕ್ಕೆ ಆಗಮಿಸುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಸಕಲ ಸಿದ್ಧತೆ ಕೈಗೊಂಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande