ಗದಗ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗದಗ ನಗರದ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅಕ್ಬರ್‌ಸಾಬ್ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್ ಸೇರಿದಂತೆ ಗದಗ ಬೆಟಗೇರಿ ನಗರ ಸಭೆ ಸದಸ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP