ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ
ಉಡುಪಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವ
Flag hosting


ಉಡುಪಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು.‌

ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande