ಮುನಿರಾಬಾದ್ : ನಾಳೆ ವಿದ್ಯುತ್ ಗ್ರಾಹಕರ ಸಂವಾದ ಸಭೆ
ಕೊಪ್ಪಳ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನಾಳೆ ಬೆಳಿಗ್ಗೆ 11 ಗಂಟ
ಮುನಿರಾಬಾದ್ : ನಾಳೆ ವಿದ್ಯುತ್ ಗ್ರಾಹಕರ ಸಂವಾದ ಸಭೆ


ಕೊಪ್ಪಳ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ಸರ್ಕಾರದ ಆದೇಶದನ್ವಯ ಹಾಗೂ ಮೇಲಾಧಿಕಾರಿಗಳ ನಿರ್ದೇಶನದನ್ವಯ ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ಪ್ರತಿ ತಿಂಗಳಿನ 3ನೇ ಶನಿವಾರದಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಂತೆ ಆಗಸ್ಟ್ 16 ರಂದು ಮುನಿರಾಬಾದ್ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿಗಳಾದ ಮುನಿರಾಬಾದ್ ಗಾ.ಪಂ., ಹುಲಿಗಿ, ಹಿಟ್ನಾಳ, ಅಗಳಕೇರಾ, ಶಿವಪುರ, ಗಿಣಿಗೇರಾ, ಹಿರೇಬಗನಾಳ, ಕುಣಿಕೇರಾ, ಕಲ್‍ತಾವರಗೇರಾ, ಬಂಡಿಹರ್ಲಾಪುರ, ಬೂದುಗುಂಪಾ, ಗುಳದಳ್ಳಿ, ಬೇವಿನಹಳ್ಳಿ, ಇಂದರಗಿ, ಹೊಸಳ್ಳಿ, ವನ ಬಳ್ಳಾರಿ ಗ್ರಾಮ ಪಂಚಾಯತಿಗಳ ಎಲ್ಲಾ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾಗಿ, ಯಶಸ್ವಿಗೊಳಿಸಬೇಕು ಎಂದು ಜೆಸ್ಕಾಂ ಮುನಿರಾಬಾದ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande