ಸ್ವಾತಂತ್ರ ದಿನಾಚರಣೆ ವೇಳೆ ಬೆಂಗಳೂರಿನಲ್ಲಿ‌ ನಿಗೂಢ ಸ್ಪೋಟ : ಓರ್ವ ಬಾಲಕ ಸಾವು
ಬೆಂಗಳೂರು, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ‌ ಸಂಭವಿಸಿದ ನಿಗೂಢ ಸ್ಫೋಟದಿಂದ ಜನತೆ ಬೆಚ್ಚಿಬಿದ್ದಿದ್ದಾರೆ. ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯಲ್ಲಿ ಸಂಭವಿಸಿದ ಈ ಘಟನೆಗೆ 8 ವರ್ಷದ ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದು, ೧೦ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯ
Blast


ಬೆಂಗಳೂರು, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ‌ ಸಂಭವಿಸಿದ ನಿಗೂಢ ಸ್ಫೋಟದಿಂದ ಜನತೆ ಬೆಚ್ಚಿಬಿದ್ದಿದ್ದಾರೆ. ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯಲ್ಲಿ ಸಂಭವಿಸಿದ ಈ ಘಟನೆಗೆ 8 ವರ್ಷದ ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದು,

೧೦ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸಂಜಯ್ ಗಾಂಧಿ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ತೀವ್ರ ಸ್ವರೂಪದಿಂದ ಗಾಯಗೊಂಡಿರುವ 60 ವರ್ಷದ ಸರಸಮ್ಮ ಎಂಬ ಮಹಿಳೆ ಸ್ಥಿತಿ ಗಂಭೀರವಾಗಿದೆ.

ಸ್ಫೋಟದ ತೀವ್ರತೆಗೆ ಸುಮಾರು 13 ಮನೆಗಳಿಗೆ ಹಾನಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿ ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಹಾಗೂ ಹಾನಿಗೊಳಗಾದ ಮನೆಗಳ ದುರಸ್ತಿ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದಾರೆ.

ಘಟನೆ ಕುರಿತು ಮಾಧ್ಯಮಗಳಿಗೆ ಮಾಹಿತಿ‌ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ , ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಫೋಟ ಸಂಭವಿಸಿದ್ದು, ಅದರ ತೀವ್ರತೆಗೆ 13 ಮನೆಗಳಿಗೆ ಹಾನಿಯಾಗಿದೆ. “ಒಟ್ಟು 5 ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ನಿಖರ ಸ್ವರೂಪವನ್ನು ತಕ್ಷಣ ಹೇಳಲು ಸಾಧ್ಯವಿಲ್ಲ ಸಂಪೂರ್ಣ ತನಿಖೆ ನಂತರ ಸ್ಪೋಟದ ಕುರಿತು ವಿವರ ನೀಡುವುದಾಗಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande