ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ
ಕೊಪ್ಪಳ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರು ಪ್ರತಿಯೊಬ್ಬ ಭಾರತೀಯರ ಮನದಲ್ಲೂ ಅಮರರಾಗಿ ಉಳಿದಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ
79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ


79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ


79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ


ಕೊಪ್ಪಳ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರು ಪ್ರತಿಯೊಬ್ಬ ಭಾರತೀಯರ ಮನದಲ್ಲೂ ಅಮರರಾಗಿ ಉಳಿದಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.

ಅವರು ಶುಕ್ರವಾರ ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಸುಭಾμïಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ಲಾಲ್ ಬಹದ್ದೂರ್ ಶಾಸ್ತ್ರಿ, ಡಾ.ಬಿ.ಆರ್.ಅಂಬೇಡ್ಕರ್, ಗೋಪಾಲಕೃಷ್ಣ ಗೋಖಲೆ, ಲಾಲಾ ಲಜಪತರಾಯ್, ಬಾಲಗಂಗಾಧರ ತಿಲಕ್, ಮೌಲಾನಾ ಅಬುಲ್ ಕಲಾಂ ಅಜಾದ್, ಭಗತ್ ಸಿಂಗ್, ರಾಜ್‍ಗುರು, ಕಿತ್ತೂರು ರಾಣಿ ಚೆನ್ನಮ್ಮ, ಹೀಗೆ ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು ಪ್ರತಿಯೊಬ್ಬ ಭಾರತೀಯರ ಮನದಲ್ಲೂ ಅಮರರಾಗಿ ಉಳಿದಿದ್ದಾರೆ. ನಾವೆಲ್ಲರೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ. ಜಾತಿ, ಧರ್ಮ, ಭೇದ-ಭಾವ ಮಾಡದೇ ಎಲ್ಲರೂ ಸಮಾನರಾಗಿ ಶಾಂತಿಯಿಮದ ಬಾಳೋಣ. ದೇಶಪ್ರೇಮ ಬೆಳೆಸಿಕೊಳ್ಳಲು ಪ್ರೇರಣೆಯಾದ ಈ ದಿನದಂದು ಸಮ ಸಮಾಜ ಕಟ್ಟಲು ಸಂಕಲ್ಪ ಮಾಡೋಣ ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಕೊಪ್ಪಳ ಜಿಲ್ಲೆಯ ಹೋರಾಟಗಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗಿಯಾದ ಕೊಪ್ಪಳ ಜಿಲ್ಲೆಯ ಮುಂಡರಗಿ ಭೀಮರಾಯರು, ಹಮ್ಮಿಗೆ ಕೆಂಚನಗೌಡರು, ಇಟಗಿಯ ವೀರಭದ್ರಯ್ಯನವರು, ಶಿರೂರು ವೀರಭದ್ರಪ್ಪನವರು, ಶಿವಮೂರ್ತಿಸ್ವಾಮಿ ಅಳವಂಡಿಯವರು, ಜನಾರ್ಧನರಾಯ ದೇಸಾಯಿಯವರು, ಎಲ್.ಕೆ.ಷರೀಫ್‍ರವರು, ಬಿಂದು ಮಾಧವರಾವ್ ಅವರು, ಬಿ.ಕೆ. ಪ್ರಾಣೇಶಾಚಾರ್ಯರು, ಮುರಡಿ ಭೀಮಜ್ಜ ಮೊದಲಾದ ಧೀಮಂತರುಗಳ ದೇಶ ಪ್ರೇಮದ ಗುಣವು ನಮಗೆಲ್ಲ ಸ್ಪೂರ್ತಿಯಾಗಲಿ. ಅವರ ಸೇವಾಗುಣವನ್ನು ಇಂದು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್, ಕೊಪ್ಪಳ ತಹಶಿಲ್ದಾರ ವಿಠ್ಠಲ ಚೌಗಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಮತ್ತು ಶಾಲಾ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande