ಹೊಸಪೇಟೆ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 79ನೇ ಸ್ವಾತಂತ್ರೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಶುಕ್ರವಾರ ನೆರವೇರಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ μÁ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಹೊಸಪೇಟೆಯ ಜೋಳದರಾಶಿಯ ಗುಡ್ಡದ ಮೇಲೆ ಇಲಾಖೆಯ ಅಧಿಕಾರಿಗಳೊಂದಿಗೆ ಧ್ವಜಾರೋಹಣ ನೆರವೇರಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್