ದೆಹಲಿ ಕೆಂಪು ಕೋಟೆ ಮೇಲೆ ಪ್ರಧಾನಿಯಿಂದ ಧ್ವಜಾರೋಹಣ
ನವದೆಹಲಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನದ ಸಂಭ್ರಮ ಮನೆಮಾಡಿದೆ. ರಾಷ್ಟ್ರ ರಾಜಧಾನಿಯಲ್ಲಿನ ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಧ್ವಜಾರೋಹಣ ಮಾಡಿದರು. ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಸತತ
Flag hosting


ನವದೆಹಲಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನದ ಸಂಭ್ರಮ ಮನೆಮಾಡಿದೆ. ರಾಷ್ಟ್ರ ರಾಜಧಾನಿಯಲ್ಲಿನ ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಧ್ವಜಾರೋಹಣ ಮಾಡಿದರು.

ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಸತತ 12ನೇ ಬಾರಿ ಭಾಷಣ ಮಾಡುತ್ತಿದ್ದಾರೆ. ಈ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯ ಥೀಮ್ 'ನಯಾ ಭಾರತ್​' ಆಗಿದೆ. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯತ್ತ ದೇಶವನ್ನು ಮುನ್ನಡೆಸುವ ಗುರಿ ಹೊಂದಲಾಗಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಂಚಾಯತ್​ ರಾಜ್ ಸಚಿವಾಲಯದಿಂದ ವಿವಿಧ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 210 ಪಂಚಾಯತ್ ಪ್ರತಿನಿಧಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಈ ವರ್ಷದ ವಿಶೇಷ ತಮ್ಮ ಗ್ರಾಮ ಪಂಚಾಯತ್‌ಗಳಲ್ಲಿ ಸುಧಾರಣೆಗಳನ್ನು ತಂದಿರುವ ನಾಯಕರು ಭಾಗಿಯಾಗಿದ್ದು, ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪಂಚಾಯತ್ ನಾಯಕಿಯರು ಸೇರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande