ರಾಯಚೂರು, 15 ಆಗಸ್ಟ್ (ಹಿ.ಸ.) :
ಆ್ಯಂಕರ್: ಪೀಠ ಸಂಖ್ಯೆ 04ರ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ನಾಳೆ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಆಗಸ್ಟ್ 15ರ ರಾತ್ರಿ 8.40ಕ್ಕೆ ಬೆಂಗಳೂರಿನಿ0ದ ಉದ್ಯಾನ್ ಎಕ್ಸ್ಪ್ರೆಸ್ ರೈಲು ಮೂಲಕ ನಿರ್ಗಮಿಸಿ, ಆಗಸ್ಟ್ 16ರ ಬೆಳಿಗ್ಗೆ 5 ಗಂಟೆಗೆ ರಾಯಚೂರಿಗೆ ಆಗಮಿಸಿ ನಗರದ ಸರ್ಕೀಟ್ ಹೌಸ್‌ನಲ್ಲಿ ವಾಸ್ಯವ್ಯ ಮಾಡುವರು.
ಬಳಿಕ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯುವ ಪಿಐಒಗಳ ಕಾರ್ಯಾಗಾರದಲ್ಲಿ ಭಾಗಿಯಾಗುವರು.
ಮಧ್ಯಾಹ್ನ 2 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಸಾರ್ವಜನಿಕರ ಭೇಟಿ ನಡೆಸಿ ರಾತ್ರಿ 8 ಗಂಟೆಗೆ ಕಲ್ಬುರ್ಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ರಾಜ್ಯ ಮಾಹಿತಿ ಆಯುಕ್ತರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್