ಕೊಪ್ಪಳ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯಲಬುರ್ಗಾ ತಾಲೂಕಿನ ತಾಳಕೇರಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಕನ್ನಡ, ಇಂಗ್ಲೀμï, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಿಗೆ ತಲಾ ಒಂದು ಹುದ್ದೆ ಖಾಲಿ ಇದ್ದು, 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಕನ್ನಡ ವಿಷಯಕ್ಕೆ ಎಂಎ ಕನ್ನಡ, ಬಿಎಡ್, ಇಂಗ್ಲೀμï ವಿಷಯಕ್ಕೆ ಎಂಎ ಇಂಗ್ಲೀμï, ಬಿಎಡ್, ಭೌತಶಾಸ್ತ್ರಕ್ಕೆ ಎಮ್‍ಎಸ್ಸಿ ಫಿಸಿಕ್ಸ್, ಬಿಎಡ್, ರಾಸಾಯನಶಾಸ್ತ್ರಕ್ಕೆ ಎಂಎಸ್ಸಿ ಕೆಮಿಸ್ಟ್ರಿ, ಬಿಎಡ್, ಗಣಿತಕ್ಕೆ ಎಂಎಸ್ಸಿ ಮ್ಯಾಥೆಮ್ಯಾಟಿಕ್ಸ್, ಬಿಎಡ್, ಜೀವಶಾಸ್ತ್ರ ವಿಷಯಕ್ಕೆ ಎಂಎಸ್ಸಿ ಬೋಟ್ನಿ ಅಥವಾ ಜಿಯೋಲಜಿ, ಬಿಎಡ್ ವಿದ್ಯಾರ್ಹತೆ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಆಗಸ್ಟ್ 21ರೊಳಗಾಗಿ ಕಚೇರಿ ಸಮಯದಲ್ಲಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆ. 26 ರಂದು ಡೆಮೋ ಕ್ಲಾಸ್ ಹಾಗೂ ಸಂದರ್ಶನ ನಡೆಸಲಾಗುತ್ತದೆ. ಕೆಸೆಟ್ (ಏSಇಖಿ) ಪಾಸಾದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳ ದೂರವಾಣಿ ಸಂಖ್ಯೆ 7411999371, 6362982973 ಗೆ ಸಂಪರ್ಕಿಸಬಹುದು ಎಂದು ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ .
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್