ವಿಜಯಪುರ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರದ ಸೈನಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಸೈನಿಕ ಶಾಲೆಯ ಪರೇಡ್ ಮೈದಾನದಲ್ಲಿ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ರಾಜಲಕ್ಷ್ಮಿ ಪೃಥ್ವಿರಾಜ್ ಅವರು ಧ್ವಜಾರೋಹಣ ನೆರವೇರಿಸಿದರು.
ಕೆಡೆಟ್‌ಗಳನ್ನು ಉದ್ದೇಶಿಸಿ ಮಾತನಾಡುತ್ತ ಸ್ವಾತಂತ್ರ್ಯ ಹೋರಾಟಗಾರರು ಮತ್ತು ವೀರ ಸೈನಿಕರ ನಿರಂತರ ಹೋರಾಟ ಮತ್ತು ಅಪಾರ ತ್ಯಾಗದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಒತ್ತಿ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರು ಪಾಲಿಸಿದ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಪ್ರತಿಯೊಬ್ಬರು ಮಹತ್ವದ ಪಾತ್ರ ವಹಿಸಬೇಕೆಂದು ಅವರು ಸಲಹೆ ನೀಡಿದರು.
ಭವ್ಯ ಭಾರತದ ಭವಿಷ್ಯ ನಿರ್ಮಾಣದ ಬಗ್ಗೆ ವಿಶೇಷವಾಗಿ ಪ್ರಸ್ತಾಪಿಸುತ್ತ, ಪ್ರತಿಯೊಬ್ಬರೂ ಘನತೆ ಮತ್ತು ಸ್ವಾತಂತ್ರ್ಯದ ಜೀವನವನ್ನು ನಡೆಸಲು ಅವಕಾಶವಿದ್ದು ಈ ಮಹಾನ್ ರಾಷ್ಟ್ರದ ಭವಿಷ್ಯವನ್ನು ಪ್ರತಿನಿಧಿಸುವ ಯುವ ಕೆಡೆಟ್‌ಗಳು ದೊಡ್ಡ ಕನಸುಗಳನ್ನು ಕಾಣಬೇಕು ಹಾಗೂ ದೇಶ ಸೇವೆಗೆ ನಾವೆಲ್ಲರೂ ಸದಾ ಸನ್ನದ್ಧರಾಗಬೇಕು. ಸ್ವಾತಂತ್ರ್ಯದ ಜ್ವಾಲೆಯನ್ನರಿತು ಮೌಲ್ಯಗಳನ್ನು ಮೈಗೂಡಿಸಿಕೊಂಡು ಜವಾಬ್ದಾರಿಯೊಂದಿಗೆ ಮುನ್ನಡೆಯಬೇಕೆಂದು ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು.
ಈ ಮಹತ್ವದ ಸಂದರ್ಭದಲ್ಲಿ ಶಾಲಾ ಕೆಡೆಟ್‌ಗಳು ಹಾಗೂ ಶಾಲಾ ಬ್ಯಾಂಡ್ ಟೀಮ್ ಆಕರ್ಷಕ ಪಥಸಂಚಲನವನ್ನು ಪ್ರದರ್ಶಿಸಿದರು, ಸೈನಿಕ ಶಾಲೆಯ ಪ್ರಾಂಶುಪಾಲರು ಪರೇಡ್ ಮೈದಾನದಲ್ಲಿ ಪಥಸಂಚಲನವನ್ನು ವೀಕ್ಷಿಸಿ ಗೌರವ ವಂದನೆಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೆಡೆಟ್‌ಗಳಿಗೆ ಸಿಹಿಯನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪ-ಪ್ರಾಚಾರ್ಯೆ ಕಮಾಂಡರ್ ಮೀನಾ ಕುಮಾರಿ, ಆಡಳಿತಾಧಿಕಾರಿಯಾದ ಮೇಜರ್ ರಿತೇಶ್ ಕುಮಾರ್ ಹಾಗೂ ಹಿರಿಯ ಮಾಸ್ಟರ್ ಶ್ರೀ ಪಿ.ಎಂ.ಶೆಟ್ಟಿ, ಶೈಕ್ಷಣಿಕ ಮತ್ತು ಆಡಳಿತ ಸಿಬ್ಬಂದಿವರ್ಗದವರು, ಕೆಡೆಟ್‌ಗಳು, ಶಾಲೆಯ ಎನ್.ಸಿ.ಸಿ. ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande