ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಕೇಂದ್ರದ ವಿರುದ್ದ ಕಿಡಿಕಾರಿದ ಸಿದ್ದರಾಮಯ್ಯ
ಬೆಂಗಳೂರು, 15 ಆಗಸ್ಟ್ (ಹಿ.ಸ.) : ಆ್ಯಂಕರ್ : 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ತಮ್ಮ ಭಾಷಣದಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
Cm


ಬೆಂಗಳೂರು, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ತಮ್ಮ ಭಾಷಣದಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಟಿ, ಇಡಿ, ಸಿಬಿಐ ದಾಳಿಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿ, ಇಂತಹ ತನಿಖಾ ಸಂಸ್ಥೆಗಳು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ನೈಜ ಮೌಲ್ಯಗಳ ಉಳಿವಿಗಾಗಿ ಕಾರ್ಯನಿರ್ವಹಿಸಬೇಕು ಆದರೆ ಈಗ ರಾಜಕೀಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಟೀಕಿಸಿದರು. ಈ ಬಗ್ಗೆ ಜವಾಬ್ದಾರಿಯುಳ್ಳ ನಾಗರಿಕರು ಧ್ವನಿ ಎತ್ತಬೇಕೆಂದು ಕರೆ ನೀಡಿದರು.

ಇದೇ ವೇಳೆ, ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ತೋರಿಸುತ್ತಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ, ಒಕ್ಕೂಟ ವ್ಯವಸ್ಥೆಯಲ್ಲಿ ಸರ್ಕಾರ ತೆರಿಗೆ ಹಾಗೂ ಇತರ ಸಂಪನ್ಮೂಲಗಳ ಹಂಚಿಕೆಯಲ್ಲಿ ನಿಷ್ಪಕ್ಷಪಾತ ಧೋರಣೆ ಅನುಸರಿಸುತ್ತಿಲ್ಲವೆಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande