ಬೆಂಗಳೂರು, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನಪಾಳ್ಯದ ಮನೆಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 8 ವರ್ಷದ ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದು, ೧೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಂಭೀರ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವ ಕಸ್ತೂರಿ, ಸರಸಮ್ಮ , ಸಬ್ರಿನ್ ಬಾನು , ಫಾತಿಮಾ ಸೇರಿದಂತೆ ಒಟ್ಟು 12 ಮಂದಿಯನ್ನು ನಗರದ ಸಂಜಯ್‌ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಸ್ಪೋಟದ ತೀವ್ರತೆಗೆ 8ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಆಡುಗೋಡಿ ಪೊಲೀಸರು ಪ್ರಾಥಮಿಕವಾಗಿ “ಸಿಲಿಂಡರ್ ಸ್ಫೋಟವಾಗಿರಬಹುದು” ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಆದರೆ ಸ್ಥಳೀಯರು ಇದು ಸಾಮಾನ್ಯ ಸಿಲಿಂಡರ್ ಸ್ಫೋಟದಂತಿಲ್ಲ, ಎಂದು ಹೇಳುತ್ತಿದ್ದು ಅನುಮಾನ ಹೆಚ್ಚಿಸಿದೆ.
ಸ್ಫೋಟದ ಬಳಿಕ ಸುತ್ತಮುತ್ತಲಿನ ನಿವಾಸಿಗಳಲ್ಲಿ ಭಯದ ವಾತಾವರಣ ಉಂಟಾಗಿದೆ.
ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಸೂಕ್ತ ತನಿಖೆ ನಡೆಸುವಂತೆ ಬೆಂಗಳೂರು ಪೋಲಿಸ್ ಆಯುಕ್ತ ಸೀಮಂತ್ ಕುಮಾರ ಸಿಂಗ್ ಅವರಿಗೆ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa