ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ದುರಂತ : 10 ಸಾವು, 35 ಗಾಯ
ಕೋಲ್ಕತ್ತಾ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಸ್ವಾತಂತ್ರ್ಯ ದಿನದ ಬೆಳಿಗ್ಗೆ ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ–19 ರ ನಲಾ ಫೆರ್ರಿಘಾಟ್ ಬಳಿ ಪ್ರಯಾಣಿಕ ಬಸ್ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 10 ಮಂದ
Accident


ಕೋಲ್ಕತ್ತಾ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಸ್ವಾತಂತ್ರ್ಯ ದಿನದ ಬೆಳಿಗ್ಗೆ ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ–19 ರ ನಲಾ ಫೆರ್ರಿಘಾಟ್ ಬಳಿ ಪ್ರಯಾಣಿಕ ಬಸ್ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 35 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೆಳಿಗ್ಗೆ ಸುಮಾರು 7.20ರ ಸುಮಾರಿಗೆ, ಕೋಲ್ಕತ್ತಾದಿಂದ ದುರ್ಗಾಪುರದತ್ತ ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಯಿಂದ ಬಸ್‌ನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಸ್ ಅತಿವೇಗದಲ್ಲಿತ್ತು ಮತ್ತು ಚಾಲಕ ನಿದ್ದೆಗೆ ಜಾರಿದ್ದಾನೆಂಬ ಶಂಕೆ ವ್ಯಕ್ತವಾಗಿದೆ.

ಗಾಯಾಳುಗಳನ್ನು ತಕ್ಷಣ ಬುರ್ದ್ವಾನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಬಸ್ ಹಾಗೂ ಟ್ರಕ್ ಅನ್ನು ಪೊಲೀಸರು ವಶಕ್ಕೆ ಪಡೆದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿದ್ದಾರೆ. ದುರಂತದಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande