ಕೊಪ್ಪಳ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಯುವ ಪೀಳಿಗೆ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳ ಮಹತ್ವವನ್ನು ತಿಳಿದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು
ಅವರು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ನಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಶ್ರಮದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಮಹಾತ್ಮಾ ಗಾಂಧೀಜಿ, ಜವಾಹರಲಾಲ್ ನೆಹರು, ಸುಭಾμï ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಬೇಗಂ ಹಜರತ್ ಮಹಲ್, ತಾತ್ಯಾ ಟೊಪಿ, ನಾನಾ ಸಾಹೇಬ್, ಮಂಗಲ್ ಪಾಂಡೆ, ಚಂದ್ರಶೇಖರ ಆಜಾದ್, ಭಗತ್ ಸಿಂಗ್, ರಾಜಗುರು, ಖುದಿರಾಮ ಬೋಸ್, ಸುಖ ದೇವ, ಹೀಗೆ ಸಹಸ್ರಾರು ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳು ಇತಿಹಾಸದಲ್ಲಿ ಅಜರಾಮರವಾಗಿವೆ ಎಂದರು.
ನಮ್ಮ ದೇಶದಲ್ಲಿ ಪ್ರಾಂತ್ಯವಾರು ಹಲವಾರು ಯುದ್ಧಗಳು ನಡೆದರು ಕೂಡ ಪ್ರಪ್ರಥಮ ಬಾರಿಗೆ 1857ರಲ್ಲಿ ಸಿಪಾಯಿ ದಂಗೆಯ ಮೂಲಕ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೆಚ್ಚಿತು. 1885 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪಿಸಿದ ನಂತರ ಸ್ವಾತಂತ್ರ್ಯ ಚಳುವಳಿ ಮತ್ತಷ್ಟು ಚೇತರಿಕೆ ಕಂಡುಕೊಂಡಿತು. ಲಾಲ್ ಬಹಾದ್ದೂರ್ ಶಾಸ್ತ್ರಿ, ಬಾಲಗಂಗಾಧರ ತಿಲಕ ಮತ್ತು ಬಿಪಿನ್ ಚಂದ್ರ ಪಾಲ್ ರವರ ನೇತೃತ್ವದಲ್ಲಿ ಬಹಳಷ್ಟು ಹೋರಾಟಗಳು ನಡೆದವು. ಆಗಿನ ಕಾಲದಲ್ಲಿ ಪಿಪಿಪಿ ಮಾದರಿ, ಅಂದರೆ ಪ್ರೇಯರ್, ಪೆÇ್ರಟೆಸ್ಟ್ ಮತ್ತು ಮನವಿ ಕೊಡಲು ಮಾತ್ರ ಸೀಮಿತವಾಗಿತ್ತು. ನಂತರದಲ್ಲಿ ತೀವ್ರಗಾಮಿಗಳಾದ ಚಂದ್ರಶೇಖರ ಆಜಾದ್, ಭಗತ್ ಸಿಂಗ್, ರಾಜಗುರು, ಖುದಿರಾಮ ಬೋಸ್, ಸುಖ ದೇವ ಹಾಗೂ ಅನೇಕರು ಬಹಳಷ್ಟು ಹೋರಾಟಗಳನ್ನು ಮಾಡಿದರು. ಆ ಸಂದರ್ಭದಲ್ಲಿ ಗಾಂಧೀಜಿಯವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ ಮೇಲೆ ಸತ್ಯ ಮತ್ತು ಅಹಿಂಸೆಯ ತಳಹದಿಯ ಮೇಲೆ ಸ್ವಾತಂತ್ರ್ಯ ಹೋರಾಟವನ್ನು ರೂಪಿಸಿದರು. ಅವರ ನೇತೃತ್ವದಲ್ಲಿ ಅಸಹಕಾರ ಚಳವಳಿ, ಉಪ್ಪಿನ ಸತ್ಯಾಗ್ರಹ ತೆರಿಗೆ ರಹಿತ ಚಳುವಳಿ, ಕ್ವಿಟ್ ಇಂಡಿಯಾ ಚಳುವಳಿ ಹೀಗೆ ಹಲವಾರು ಹೋರಾಟಗಳು ನಡೆದಿದ್ದವು. ಇದಕ್ಕೆ ಪೂರಕವಾಗಿ ಸುಭಾμï ಚಂದ್ರ ಬೋಸ್ ರವರು ಇಂಡಿಯನ್ ನ್ಯಾಷನಲ್ ಆರ್ಮಿಯನ್ನು ಕಟ್ಟಿಕೊಂಡು, ಬೇರೆ ದೇಶಗಳ ಸಹಕಾರವನ್ನು ಸಹ ಪಡೆದುಕೊಂಡು ಸ್ವಾತಂತ್ರ್ಯ ಹೋರಾಟವನ್ನು ಮಾಡಿದರು. ಇಂತಹ ಎಲ್ಲಾ ಮಹನೀಯರ ಹೋರಾಟಗಳ ಪ್ರತಿಯಾಗಿ ನಮ್ಮ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆಯಿತು ಎಂದು ತಿಳಿಸಿದರು.
ಯಾರು ಇತಿಹಾಸವನ್ನು ಓದುವುದಿಲ್ಲ, ಅವರಿಂದ ಇತಿಹಾಸ ನಿರ್ಮಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಆದ್ದರಿಂದ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಎಲ್ಲರೂ ತಿಳಿದುಕೊಂಡು, ಯುವ ಪೀಳಿಗೆಗೆ ಹೇಳಿಕೊಡುವ ಕೆಲಸವಾಗಬೇಕಿದೆ. ತಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭಾಶಯಗಳು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ್, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್