ದಾವಣಗೆರೆ, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಪಡೆಯಲು ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ನಂ.6 ವಿದ್ಯಾರ್ಥಿನಿಲಯ ದಾವಣಗೆರೆ ಟೌನ್ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡವು ಇಲ್ಲದೇ ಇರುವುದರಿಂದ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿನಿಲಯವನ್ನು ಪ್ರಾರಂಭಿಸಲು ಬಾಡಿಗೆ ಕಟ್ಟಡ ಅವಶ್ಯಕತೆ ಇರುವುದರಿಂದ ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20 ರೊಳಗಾಗಿ ಕಚೇರಿಗೆ ಸಲ್ಲಿಸಲು ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa