ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರಿಂದ ಡಿ.ಕೆ.ಶಿ ಭೇಟಿ
ಬೆಂಗಳೂರು, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ಸಂಘದ ಪ್ರತಿನಿಧಿಗಳು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದ ಬಳಿ ಭೇಟಿ ಮಾಡಿ ಬೇಡಿಕೆಗಳ ಕುರಿತು ಅಹವಾಲು ಸಲ್ಲಿಸಿದರು. ಕಳೆದ 30 ವರ್ಷಗಳಿಂದ ಬಿಬಿಎಂಪಿಯ
Request


ಬೆಂಗಳೂರು, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ಸಂಘದ ಪ್ರತಿನಿಧಿಗಳು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದ ಬಳಿ ಭೇಟಿ ಮಾಡಿ ಬೇಡಿಕೆಗಳ ಕುರಿತು ಅಹವಾಲು ಸಲ್ಲಿಸಿದರು.

ಕಳೆದ 30 ವರ್ಷಗಳಿಂದ ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ 2017ರಿಂದ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಬಿಬಿಎಂಪಿ ವತಿಯಿಂದ ವೇತನ ಪಾವತಿಸುವಂತೆ ತಮ್ಮ ಬೇಡಿಕೆಗಳ ಬಗ್ಗೆ ಅಹವಾಲು ಸಲ್ಲಿಸಿದರು.

ಅಹವಾಲು ಆಲಿಸಿದ ಡಿ.ಕೆ.ಶಿವಕುಮಾರ್ ಬೇಡಿಕೆಗೆ ಆದಷ್ಟು ಬೇಗನೇ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande