ಬೆಂಗಳೂರು, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಧಿಕಾರಕ್ಕಾಗಿ ಬಿಜೆಪಿ ಯಾವುದೇ ಹಂತಕ್ಕೆ ಹೋಗಲು ಸಿದ್ದ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ನೀಡಿದ್ದು, ಚುನಾವಣೆ ಅಕ್ರಮದ ಕುರಿತು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪು ಧಿಕ್ಕರಿಸಿ, ಅಧಿಕಾರ ಉಳಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿ, ದೇಶದಲ್ಲಿ ಕರಾಳ ಶಾಸನ ಜಾರಿ ಮಾಡಿದವರು ಯಾರು ಪ್ರಶ್ನಿಸಿದೆ.
ಅಧಿಕಾರಕ್ಕಾಗಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸೋಲಿಸಲು ಮತಗಳನ್ನು ಅಸಿಂಧುಗೊಳಿಸಿ ಸೋಲಿಸಿದ್ದು ಯಾರು?
ಅಧಿಕಾರಕ್ಕಾಗಿ ಯಾವುದೇ ಹಂತಕ್ಕೂ ಹೋಗಲು ಕಾಂಗ್ರೆಸ್ ತಯಾರಿದೆ ಎಂಬುದು ಅಂದೇ ನಿಮ್ಮ ಪಕ್ಷ ಸಾಬೀತು ಮಾಡಿತ್ತು!
ಸತತ ಸೋಲಿನಿಂದ ಕಂಗೆಟ್ಟು, ಗಾಳಿಯಲ್ಲಿ ಗುಂಡು ಹೊಡೆಯುವ ಬದಲು ಚುನಾವಣಾ ಆಯೋಗಕ್ಕೆ ಸಾಕ್ಷ್ಯಾಧಾರಗಳ ಮೂಲಕ ಪ್ರಮಾಣ ಪತ್ರ ಸಲ್ಲಿಸಿ ಎಂದು ಒತ್ತಾಯಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa